Index   ವಚನ - 1    Search  
 
ಆಕಾರವೆಂಬೆನೆ ನಿರಾಕಾರವಾಗಿದೆ ನಿರಾಕಾರವೆಂಬೆನೆ ಅತ್ತತ್ತ ತೋರುತ್ತದೆ ತನ್ನನಳಿದು ನಿಜವುಳಿದ ಮಹಾಲಿಂಗ ತ್ರಿಪುರಾಂತಕನ ನಿಲವ ಕಂಡು ಒಳಕೊಂಡ ಮರುಳ ಶಂಕರದೇವರ ಮೂರ್ತಿಯ ನಿಮ್ಮಿಂದ ಕಂಡು ಬದುಕಿದೆನು ಕಾಣಾ ಸಂಗನಬಸವಣ್ಣ.