Index   ವಚನ - 5    Search  
 
ನಾರಿಯೂ ಮರನೂ ಕೂಡಿ ಬಾಗಲಿಕ್ಕಾಗಿ ಶರ ಚರಿಸುವುದಕ್ಕೆಡೆಯಾಯಿತ್ತು. ಭಕ್ತಿಯೂ ವಿರಕ್ತಿಯೂ ಕೂಡಲಿಕ್ಕಾಗಿ ವಸ್ತುವನರಿವುದಕ್ಕೆ ಒಡಲಾಯಿತ್ತು. ಆ ವಸ್ತು ತ್ರಿಕರಣವ ವೇದಿಸಿದ ಮತ್ತೆ ತ್ರಿಗುಣ ನಷ್ಟ. ಆ ನಷ್ಟದಲ್ಲಿ ಪಂಚೇಂದ್ರಿಯ ನಾಶನ. ಸಪ್ತಧಾತು ವಿಸರ್ಜನ, ಅಷ್ಟಮದ ಹುಟ್ಟುಗೆಟ್ಟಿತ್ತು, ಹದಿನಾರು ತೊಟ್ಟುಬಿಟ್ಟಿತ್ತು, ಇಪ್ಪತ್ತೈದರ ಬಟ್ಟೆ ಕೆಟ್ಟಿತ್ತು, ಸದ್ಭಾವದ ನಿಷ್ಠೆ ನಷ್ಟವಾಯಿತ್ತು. ಇಂತಿವರೊಳಗಾದ ಕುಲವಾಸನೆ ಹೊಲಬುಗೆಟ್ಟಿತ್ತು. ನಾನಾರೆಂಬುದ ತಿಳಿದಲ್ಲಿ ಕೂಗಿನ ಕುಲಕ್ಕೆ ಹೊರಗಾಯಿತ್ತು ಮಹಾಮಹಿಮ ಮಾರೇಶ್ವರನನರಿಯಲಾಗಿ.