Index   ವಚನ - 5    Search  
 
ಎಲಾ, ಪರಮ ಪಾವನಚರಿತ ಪಾರ್ವತೀಶ ಪಾಪನಾಶ ಪರಮೇಶ ಈಶ. ಇಂತಪ್ಪ ಈಶನು ಭಕ್ತನಾ ಕರಸ್ಥಲದಲ್ಲಿ ಬಂದ ಬಳಿಕ ಭಕ್ತನೇ ದೊಡ್ಡಿತ್ತು ಕಾಣೆಲಾ! ಇಂತಪ್ಪ ಭಕ್ತನಾ ಶರೀರಕ್ಕೆ ರೋಗ ಬಂದರೆ, ಬಳಿಕ ವೈದ್ಯನಾ ಕರೆಸಿ, ಮಹಾವೈದ್ಯವಾ ಮಾಡಿಸಿ, ವೈದ್ಯ ಭಾಗವ ತೆಗೆದು, ವೈದ್ಯ ಸೇವಿಸಿ, ಮಿಕ್ಕ ಎಂಜಲ ತಿಂದು ಬದುಕೇನೆಂಬೋ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ