Index   ವಚನ - 1    Search  
 
ಹದತಪ್ಪಿ ಕುಟ್ಟುಲು ನುಚ್ಚಲ್ಲದೆ ಅಕ್ಕಿಯಿಲ್ಲ. ವ್ರತಹೀನನ ನೆರೆಯೆ ನರಕವಲ್ಲದೆ ಮುಕ್ತಿಯಿಲ್ಲ. ಅರಿಯದುದು ಹೋಗಲಿ, ಅರಿದು ಬೆರೆದೆನಾದಡೆ, ಒಲ್ಲೆ ಬಲ್ಲೆನಾಗಿ, ನಿಮ್ಮಾಣೆ ನಿರ್ಲಜ್ಜೇಶ್ವರಾ.