Index   ವಚನ - 2    Search  
 
ಬಿತ್ತು ಅಂಕುರವ ನುಂಗಿಪ್ಪಾಗ ಅಂಕುರ ಆ ಬಿತ್ತ ತನ್ನಯ ಸಂಕೇತದಲ್ಲಿ ಇರಿಸಿಕೊಂಡು ಇಹಾಗೆ ಉಭಯದ ಭೇದ ಎಲ್ಲಿ ಅಡಗಿತ್ತು ಹೇಳಿರಣ್ಣಾ. ಅರುಹಿಸಿಕೊಂಬ ಕುರುಹು; ಆ ಅರುಹಿನಲ್ಲಿ ಕುರುಹಿನ ಕಳೆ ನಿಂದ ತೆರಪಾವುದು? ಅರುಹಿಸಿಕೊಂಬ ಅರಿವು ತೋರಿಸಿಕೊಂಬ ಕುರುಹಿನ ಕಳೆ ಬೇರೊಂದೆಡೆ ತೆರಪಿಲ್ಲ. ಅದು ತಾನೆ ನಿಶ್ಚಯ; ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.