Index   ವಚನ - 76    Search  
 
ಮಹಾಮನೆಯ ಮಂಟಪದಲ್ಲಿ ನಾಲ್ಕು ನಡುವಳ ಕಂಬದ ನಡುವಳ ಕಂಬದಲ್ಲಿ ಒಂದು ಒರಲೆ ಮನೆಯ ಮಾಡಿತ್ತು. ಅದಕ್ಕೆ ಎಂಟು ಕಂಬ, ಒಂಬತ್ತು ಬಾಗಿಲು, ಹತ್ತು ಕದ; ಮಿಗಿಲೊಂದು ಮುಚ್ಚುವುದಕ್ಕೆ ಬಾಗಿಲಿಲ್ಲ. ತುಂಬಿ ಅಲ್ಲಿ ಹಾರಿತ್ತು. ಆ ಆತ್ಮನ ನೆಲೆಯನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.