Index   ವಚನ - 5    Search  
 
ಅನಂತಾನಂತಕಾಲ ನಿತ್ಯವೆಂಬಿರಿ ಸಂಸಾರ. ಇದು ಹುಸಿ ಇದು ಹುಸಿ ಕಂಡ್ಯಾ ಎಲವೊ! ಇಂದಿನಿಂದಿನ ಸುಖ ಇಂದಿಂಗೆ ಪರಿಣಾಮ. ದಿನದಿನದ ಸುಖ ಹುಸಿ ಕಂಡ್ಯಾ ಎಲವೊ! ಘನಘನವೆಂಬ ರೂಪಿಂಗೆ ರತಿಯಿಲ್ಲವಯ್ಯಾ. ಮಹಾಲಿಂಗ ಗಜೇಶ್ವರನಲ್ಲಿ ತಿಳಿದು ನೋಡಾ ಎಲವೊ!