Index   ವಚನ - 17    Search  
 
ಈ ಸಕಲದೊಳಗೆ ಒಂದು ಸಯವಿಲ್ಲದೆ ನಾವು ಹಿರಿಯರು ನಾವು ಲಿಂಗವಂತರೆಂಬರು. ಇದಿರ ಕೈಯಲ್ಲಿ ಎನಿಸಿಕೊಳ್ಳುತ್ತಿಹರು ಮನ ನಾಚದೆ. ಇಂಥ ಮೂಗುನಾಚಿಗಳ ಮೆಚ್ಚುವನೆ ಮಹಾಲಿಂಗ ಗಜೇಶ್ವರನಲ್ಲಿ ಎನ್ನ ಹೆತ್ತ ತಂದೆ ಪೂರ್ವಾಚಾರ್ಯ ಸಂಗನಬಸವಣ್ಣ.