Index   ವಚನ - 19    Search  
 
ಋತುಕಾಲ ತಪ್ಪಿದ ಕೋಗಿಲೆಯಂತೆ ನುಡಿಯದಂತಿರ್ದಳಲ್ಲಾ! ಪರಿಮಳ ತಪ್ಪಿದ ಭ್ರಮರನಂತೆ ಸುಳಿಸುಳಿಗೊಳುತಿರ್ದಳಲ್ಲಾ! ಫಲವು ತಪ್ಪಿದ ಬಂಜೆ ಬನದೊಳಗಣ ಅರಗಿಳಿಯಂತಿರ್ದಳಲ್ಲಾ!! ಧುರಭಾರದ ಜವ್ವನದಲ್ಲಿ ತೋರಣದೆಲೆಯಂತೆ ಮಹಾಲಿಂಗ ಗಜೇಶ್ವರನ ನೆರೆವ ಭರದಿಂದ ಅಳಿಕಾವೃದ್ಧೆಯಾಗಿರ್ದಳಲ್ಲಾ!