Index   ವಚನ - 21    Search  
 
ಎನ್ನ ಕರಸ್ಥಲವೇ ಬಸವಣ್ಣನಯ್ಯಾ. ಎನ್ನ ಮನಸ್ಥಲವೇ ಚೆನ್ನಬಸವಣ್ಣನಯ್ಯಾ. ಎನ್ನ ಭಾವಸ್ಥಲವೇ ಪ್ರಭುದೇವರಯ್ಯಾ. ಇಂತೆನ್ನ ಕರ ಮನ ಭಾವಂಗಳಲ್ಲಿ ಇಷ್ಟ ಪ್ರಾಣ ಭಾವಂಗಳು ತಲ್ಲೀಯವಾಗಿ ಮಹಾಲಿಂಗ ಗಜೇಶ್ವರಾ, ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲಿ ಕಂಡು ಪರಮ ಸುಖಿಯಾಗಿರ್ದೆನು.