Index   ವಚನ - 57    Search  
 
ಮಾಗಿಯ ಹುಲ್ಲಿನ ಸೋಂಕಿನಂತೆ ತನು ಪುಳಕಿತಳಾದಳವ್ವೆ. ನುಡಿ ತೊದಳು ಆತನ ಒಲವೆ ಆಧಾರವಾಗಿದ್ದಳವ್ವೆ. ಬಿಳಿಯ ತುಂಬಿ ಕುಂಕುಮ ರಸದಲ್ಲಿ ಬಂಡುಂಡಂತೆ. ಮಹಾಲಿಂಗ ಗಜೇಶ್ವರನಲ್ಲಿ ತನ್ನಲ್ಲಿ ತಾನೆ ರತಿಯಾಗಿರ್ದಳವ್ವೆ.