Index   ವಚನ - 58    Search  
 
ಮಾತಂಗಿಯ ಹೊಳೆಯಲ್ಲಿ ಉತ್ತಮನ ನೆಳಲು ಸುಳಿದಡೆ ರೂಪು ಹೊಲೆಯನಾಗಬಲ್ಲುದೆ ಅಯ್ಯಾ? ಮರ್ತ್ಯಲೋಕದ ಮಾನವರೊಳಗೆ ಶರಣ ಸುಳಿದಡೆ ಶರಣ ಸೂತಕಿಯಾಗಬಲ್ಲನೆ ಅಯ್ಯಾ? ಮರ್ತ್ಯರ ಭವಿಯ ಮಾತ ವರ್ತಮಾನವೆಂಬ ಜೀವಿಗಳ ಅಗೆದೊಗೆಯದೆ ಮಾಬನೆ ಮಹಾಲಿಂಗ ಗಜೇಶ್ವರಯ್ಯ!