Index   ವಚನ - 24    Search  
 
ಕನ್ನವನಿಕ್ಕಿದ ಕಳ್ಳನಿದ್ದಂತೆ ಮಣ್ಣ ಬಂಧಿಸಬಹುದೆ? ಎನ್ನ ಅಂಗ ಪ್ರಾಣಕ್ಕೆ ಲಿಂಗವಲ್ಲದೆ ಕರಣಂಗಳಿಗೆ ಬೇರೊಂದಂಗವುಂಟೆ? ಇದಕ್ಕೆ ಅಂಜುವಡೆ, "ಗುರೋಃ ಪಾಪಂ ಶಿಷ್ಯಸ್ಯಾಪಿ ಶಿಷ್ಯಪಾಪಂ ಗುರೋರಪಿ" ಎಂಬುದು ಹುಸಿಯಾದಡೆ ಹೇಳಿಸಿಕೊಂಬುವ ಗುರು ಹೇಳುವಾತ ಶಿಷ್ಯನೆ? ಆತ ಹೇಳೂದಕ್ಕೆ ಮುನ್ನ ತಾನರಿಯಬೇಕು. ಈ ಉಭಯಕ್ಕೆ ಭಿನ್ನ ಭಾವವಿಲ್ಲ. ಜೂಳಿಯ ಕುಂಭದಂತೆ ಏತರಲ್ಲಿ ಒದಗಿದಡೂ ಸರಿ. ಸಗುಣನೀತಿಗೆ ಮುಕ್ತಿ ಉಭಯಸ್ಥಲ ಯುಕ್ತಿ ನಾರಾಯಣಪ್ರಿಯ ರಾಮನಾಥಾ.