Index   ವಚನ - 29    Search  
 
ಕಾಡಿ ಬೇಡಿ ಉಂಬರೆಲ್ಲರು ಜಗದ ರೋಡಗವಂತರು. ಬೇಡದೆ ಕಾಡದೆ ಚಿತ್ತದಲ್ಲಿ ಆಸೆಯ ಕಲೆದೋರದೆ, ಹೊತ್ತ ಘಟಕ್ಕೆ ತುತ್ತು, ಶೀತಕ್ಕೆ ಅಂಬರ ನಿರ್ಜಾತನ ಒಲುಮೆ ಎಲ್ಲಿದ್ದರೂ ತಪ್ಪದೆಂದು ವಿಶ್ವಾಸವುಳ್ಳ ಶರಣಂಗೆ ಅವ ತೊಟ್ಟಿದ್ದುದು ಅದೇತರ ಕಾಯ? ದಗ್ಧಪಟ ನ್ಯಾಯ! ನಾರಾಯಣಪ್ರಿಯ ರಾಮನಾಥನಲ್ಲಿ ಕಳೆದುಳಿದ ಶರಣಂಗೆ!