Index   ವಚನ - 51    Search  
 
ಚಿನ್ನದೊಳಗಣ ಬಣ್ಣದಂತೆ, ಬಣ್ಣ ನುಂಗಿದ ಬಂಗಾರದಂತೆ, ಅನ್ಯ ಭಿನ್ನವಿಲ್ಲದ ಲಿಂಗೈಕ್ಯವು. ಲಿಂಗಾಂಗವಾದಲ್ಲಿ, ಅಂಗ ಲಿಂಗವಾದಲ್ಲಿ ಹಿಂಗದ ಭಾವ ಚಿನ್ನ ಬಣ್ಣದ ತೆರ. ಇದು ಪ್ರಾಣಲಿಂಗಯೋಗ, ಸ್ವಾನುಭಾವ ಸಮ್ಮತ. ಉಭಯ ನಾಶನ ಐಕ್ಯಲೇಪ ನಾರಾಯಣಪ್ರಿಯ ರಾಮನಾಥಾ.