Index   ವಚನ - 60    Search  
 
ನಾನು ಭೃತ್ಯನಾಗಿದ್ದಲ್ಲಿ ಕರ್ತರ ಇರವ ವಿಚಾರಿಸೂದು ಭಕ್ತರ ಇರವಲ್ಲ, ಇದು ವಿಶ್ವಾಸದ ಯುಕ್ತಿ. ಇಷ್ಟಕಂಜಿ ಬಿಟ್ಟಡೆ ಮೊದಲು ಮೋಸವಾದಲ್ಲಿ ಲಾಭಕ್ಕೆ ಸರಿಹುದುಗುಂಟೆ? ಶರಣರ ಮರೆ ಮನಕ್ಕೆ ವಿರೋಧವುಂಟೆ? ಮಣ್ಣಿನ ಹೊದಕೆ ಮೈ ಜಲಕ್ಕೆ ನಿರ್ಮಲವಲ್ಲದೆ ಭಿನ್ನಭಾವವಿಲ್ಲ. ಎನ್ನ ಮಾತು ನಿನಗೆ ಅನ್ಯವೆ, ನನ್ನಿಯಲ್ಲದೆ? ಅದಕ್ಕೆ ಭಿನ್ನ ಭಾವವಿಲ್ಲ, ನಾರಾಯಣಪ್ರಿಯ ರಾಮನಾಥಾ.