Index   ವಚನ - 1    Search  
 
ಪ್ರಥಮದಲ್ಲಿ ನಾಮ ರೂಪು ಕ್ರೀ ಏನೂ ಏನೂ ಇಲ್ಲದ ಮಹಾಘನ ಶೂನ್ಯಬ್ರಹ್ಮವು. ಆ ಶೂನ್ಯಬ್ರಹ್ಮದಿಂದ ಶುದ್ಧ ಪ್ರಣವ. ಆ ಶುದ್ಧ ಪ್ರಣವದಿಂದ ಚಿತ್ತು ಭಾವದಕ್ಷರ. ಆ ಚಿತ್ತು ಭಾವದಕ್ಷರದಿಂದ ಪರಾಶಕ್ತಿ. ಆ ಪರಾಶಕ್ತಿಯಿಂದ ಅಕ್ಷರತ್ರಯಂಗಳು. ಆ ಅಕ್ಷರತ್ರಯಂಗಳಿಂದ ಓಂಕಾರ. ಆ ಓಂಕಾರವೆ ಬಸವಣ್ಣನು. ಆ ಬಸವಣ್ಣನೆ ಎನ್ನ ವದನಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬಲದ ಭುಜಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಎಡದ ಭುಜಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದೇಹಮಧ್ಯಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ ಎನ್ನ ಬಲದ ತೊಡೆಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಎಡದ ತೊಡೆಗೆ ಯಕಾರಾವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಥೂಲತನುವಿಂಗೆ ಉಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸೂಕ್ಷ್ಮತನುವಿಂಗೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕಾರಣತನುವಿಂಗೆ ಆಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಯತಕ್ಕೆ ಬಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಾಯತಕ್ಕೆ ಸಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸನ್ನಿಹಿತಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕ್ರೀಗೆ ಅವಾಚ್ಯ ಸ್ವರೂಪಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಮಹಾಶೂನ್ಯ ಸ್ವರೂಪನಾಗಿ ಬಂದನಯ್ಯಬಸವಣ್ಣ. ಎನ್ನ ರುಧಿರಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಂಸಕ್ಕೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮೇಧಸ್ಸಿಂಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಸ್ಥಿಗೆ ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಜ್ಜೆಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತ್ವಗಮಯಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದೇಹಭಾವ ಕೊಂದಹೆನೆಂದು ಬಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಹೊನ್ನು ಹೆಣ್ಣು ಮಣ್ಣೆಂಬ ಸಕಲಾಸೆಯ ಕೊಂದಹೆನೆಂದು ಸಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಇಂದ್ರಿಯ ವಿಷಯಂಗಳ ಕೊಂದಹೆನೆಂದು ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಾದಕ್ಕೆ ಆಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬಿಂದುವಿಂಗೆ ಉಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕಳೆಗೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಶ್ವಂಗೆ ಇಷ್ಟಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ತೈಜಸಿಂಗೆ ಪ್ರಾಣಲಿಂಗವಾಗಿ ಬಂದನಯ್ಯ ಬಸವಣ್ಣ ಎನ್ನ ಪ್ರಜ್ಞೆಗೆ ತೃಪ್ತಿಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸತ್ವಕ್ಕೆ ಶುದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ರಜಕ್ಕೆ ಸಿದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ತಮಕ್ಕೆ ಪ್ರಸಿದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನಗೆ ಬಕಾರವೆ ಗುರುವಾಗಿ ಬಂದನಯ್ಯ ಬಸವಣ್ಣ. ಎನಗೆ ಸಕಾರವೆ ಲಿಂಗವಾಗಿ ಬಂದನಯ್ಯ ಬಸವಣ್ಣ. ಎನಗೆ ವಕಾರವೆ ಜಂಗಮವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಥೂಲತನುವಿಂಗೆ ಇಷ್ಟಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸೂಕ್ಷ್ಮತನುವಿಂಗೆ ಪ್ರಾಣಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಕಾರಣತನುವಿಂಗೆ ಭಾವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಶಿವ ಕ್ಷೇತ್ರಜ್ಞ ಕರ್ತಾರ ಭಾವ ಚೈತನ್ಯ ಅಂತರ್ಯಾಮಿಯೆಂಬ ಷಡುಮೂರ್ತಿಗಳಿಗೆ ನಕಾರ ಮಃಕಾರ ಶಿಕಾರ ವಾಕಾರ ಯಕಾರ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ತಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಬುದ್ಧಿಗೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮನಸ್ಸಿಂಗೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಭಾವಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಬ್ರಹ್ಮತತ್ವಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಷ್ಣುತತ್ವಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ರುದ್ರತತ್ವಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಈಶ್ವರತತ್ವಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸದಾಶಿವತತ್ವಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಹಾಶ್ರೀಗುರುತತ್ವಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪೃಥ್ವಿಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಪ್ಪುವಿಂಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಗ್ನಿತತ್ವಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಾಯುವಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಕಾಶಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆತ್ಮಂಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣವಾಯುವಿಂಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಪಾನವಾಯುವಿಂಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವ್ಯಾನವಾಯುವಿಂಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಉದಾನವಾಯುವಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸಮಾನವಾಯುವಿಂಗೆ ಯಕಾರವಾಗಿ ಬಂದನಯ್ಯ ಬಸವಣ್ಣ ಎನ್ನ ಪಂಚವಾಯುವಿಂಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಧಾರಚಕ್ರಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಾಧಿಷ್ಠಾನಚಕ್ರಕ್ಕೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮಣಿಪೂರ ಚಕ್ರಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅನಾಹತಚಕ್ರಕ್ಕೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಶುದ್ಧಿಚಕ್ರಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಆಜ್ಞಾಚಕ್ರಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಚತುರ್ದಳಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷಡುದಳಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದಶದಳಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶದಳಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶದಳಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಿದಳಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚತುರಾಕ್ಷರಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷಡಾಕ್ಷರಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದಶಾಕ್ಷರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶಾಕ್ಷರಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶಾಕ್ಷರಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಿಯಾಕ್ಷರಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಮ. ಎನ್ನ ಕೆಂಪುವರ್ಣಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನೀಲವರ್ಣಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕುಂಕುಮವರ್ಣಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪೀತವರ್ಣಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ವೇತವರ್ಣಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಣಿಕ್ಯವರ್ಣಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜಾಗ್ರಾವಸ್ಥೆಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಪ್ನಾವಸ್ಥೆಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸುಷುಪ್ತಾವಸ್ಥೆಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತೂರ್ಯಾವಸ್ಥೆಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅತೀತಾವಸ್ಥೆಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಿರಾವಸ್ಥೆಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಂತಃಕರಣಂಗಳಿಗೆ ಚತುರ್ವಿಧ ಬಿಂದು ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅರಿಷಡ್ವರ್ಗಂಗಳಿಗೆ ಷಡ್ವಿಧಧಾತು ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ದಶವಾಯುಗಳಿಗೆ ದಶವಿಧ ಕ್ಷೇತ್ರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶ ಇಂದ್ರಿಯಂಗಳಿಗೆ ದ್ವಾದಶ ವಿಕೃತಿಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶಕಲೆಗೆ ಷೋಡಶಕಲಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರ ಮಮಕಾರಗಳಿಗೆ ವಿದ್ಯಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಭಕ್ತಿಸ್ಥಲಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಹೇಶ್ವರಸ್ಥಲಕ್ಕೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಸಾದಿಸ್ಥಲಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣಲಿಂಗಿಸ್ಥಳಕ್ಕೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಶರಣಸ್ಥಲಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಐಕ್ಯಸ್ಥಲಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ತಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬುದ್ಧಿಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮನಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಭಾವಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕ್ರಿಯಾಶಕ್ತಿಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಶಕ್ತಿಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಇಚ್ಛಾಶಕ್ತಿಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆದಿಶಕ್ತಿಗೆ ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪರಾಶಕ್ತಿಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ