Index   ವಚನ - 18    Search  
 
ಎನ್ನ ದ್ವಿವಿಧಾಕ್ಷರದಲ್ಲಿ ಲಿಂಗ ಸ್ವರೂಪಾಗಿ ಬಂದು ಮೂರ್ತಿಗೊಂಡನಯ್ಯ ಬಸವಣ್ಣ. ಎನ್ನ ತ್ರಿವಿಧಾಕ್ಷರದಲ್ಲಿ ಜಂಗಮಲಿಂಗ ಸ್ವರೂಪಾಗಿ ಬಂದು ಮೂರ್ತಿಗೊಂಡನಯ್ಯ ಬಸವಣ್ಣ. ಇಂತೀ ದ್ವಿವಿಧಾಕ್ಷರ ತ್ರಿವಿಧಾಕ್ಷರವೇ ಅಂಗ ಪ್ರಾಣ. ಆ ಅಂಗ ಪ್ರಾಣವೇ ಉಭಯಸ್ಥಲ. ಆ ಉಭಯಸ್ಥಲದ ಭೇದವನು ದ್ವೈತಾದ್ವೈತಿಗಳೆತ್ತ ಬಲ್ಲರಯ್ಯ? ಇದನರಿದು ಸಿದ್ಧೇಶ್ವರನು ಅಂಗ ಪ್ರಾಣದಲ್ಲಿ ಲಿಂಗ ಜಂಗಮವ ಏಕಾರ್ಥವ ಮಾಡಿ ತೋರಿಸಿಕೊಟ್ಟ ಕಾರಣ, ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗ ಪ್ರಭುವಿನಲ್ಲಿ ಅರ್ಕನ ಪ್ರಭೆಯೊಳಕೊಂಡ ಅರಿಸಿನದಂತಾದೆನಯ್ಯ, ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.