Index   ವಚನ - 30    Search  
 
ಕವಿಗಳುಯೆಂದು ಹೆಸರಿಟ್ಟುಕೊಂಡು ನುಡಿವ ಅಣ್ಣಗಳು ನೀವು ಕೇಳಿರೊ. ಪ್ರಥಮ ಶಿವಾಲ್ಯದಲ್ಲಿ ಮೂಲಸ್ಥಾನದ ಲಿಂಗವನರಿದು ಅಲ್ಲಿದ್ದ ವಿಮಳವಾದ ಗಂಟ ಕೊಯಿದು, ಸಕಲ ಪರಿಮಳ ದ್ರವ್ಯಂಗಳ ಆ ಮೂಲಲಿಂಗಕ್ಕೆ ಕೊಡಬಲ್ಲಡೆ ಕ ಎಂಬ ಅಕ್ಷರದ ಭೇದವ ಬಲ್ಲನೆಂದೆನ್ನಬಹುದು. ಪರಬ್ರಹ್ಮನ ಆಶ್ರೈಸಬಲ್ಲಡೆ ವಿ ಎಂಬ ಅಕ್ಷರದ ಭೇದವ ಬಲ್ಲಡೆ ನಿಮ್ಮ ಹೆಸರ ನೀವೇ ಇಟ್ಟುಕೊಂಡು, ಕವಿಯೆಂಬ ಎರಡಕ್ಷರದ ಭೇದವನರಿಯದೆ ವಾದ ತರ್ಕವ ಮಾಡಿ ಗುರುಗುಡುವುದು ಕಾರಣವಲ್ಲ. ಬಲ್ಲರೆ ಹೇಳಿ, ಅರಿಯದಿದ್ದರೆ ಕೇಳಿ. ಕವಿಯೆಂಬ ಎರಡು ಐವತ್ತೆರಡು ಅಕ್ಷರದ ಭೇದವ ಅಷ್ಟದಳಕಮಲವ ವಿಚಾರಿಸುವುದು, ಅಲ್ಲದ ಕಾರಣ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.