Index   ವಚನ - 10    Search  
 
ವಿಷಕ್ಕೆ ಅಂಜುವರಲ್ಲದೆ ಸರ್ಪಂಗೆ ಅಂಜುವರುಂಟೆ? ಕೊಲುವ ವ್ಯಾಘ್ರಂಗೆ ಅಂಜುವರಲ್ಲದೆ ಸುಲಿದ ಬಣ್ಣಕ್ಕೆ ಅಂಜುವರುಂಟೆ? ಅರಿವು ಸಂಪನ್ನರಲ್ಲಿ ಇದಿರೆಡೆಯಡಗಬೇಕಲ್ಲದೆ ಬರುಕಾಯದ ದರುಶನ ಬಿರುಬರಲ್ಲಿ ಉಂಟೆ? ನೆರೆಯರಿವಿನ ಹೊಲಬು ಕಾಯಕಾಂಡ ಕರ್ಮಕಾಂಡಿಗಳಲ್ಲಿ ಜ್ಞಾನಹೀನ ಪಾಷಂಡಿಗಳಲ್ಲಿ ಆವ ಭಾವದ ಮಾರ್ಗವನು ನಿಧಾನಿಸಿ ಉಪೇಕ್ಷಿಸಲಿಲ್ಲ. ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥ ಲಿಂಗವನರಿದವರಲ್ಲಿಯಲ್ಲದೆ.