Index   ವಚನ - 7    Search  
 
ಅಬ್ಧಿಯ ಘೋಷವೆದ್ದು ನಿರ್ಭರ ನಿರ್ವೇಗದಿಂದ ಅಬ್ಬರಿಸಿ ಬರುವಾಗ ಅದನೊಬ್ಬರು ಹಿಡಿದ [ರುಂಟೆ]? ಆಕಾಶದ ಸಿಡಿಲು ಆರ್ಭಟದಿಂದ ಬಡಿವಲ್ಲಿ ತಾಕು ತಡೆಯುಂಟೆ? ಮಹಾದ್ಭುತವಾದ ಅಗ್ನಿಯ ಮುಂದೆ ಸಾರವರತ ತೃಣಕಾಷ್ಠವಿ [ದ್ದುದುಂ]ಟೆ? ತಾ ಸರ್ವಮಯವಾದ ನಿಃಕಳಂಕ ನಿರಂಜನ ಐಕ್ಯಾನುಭಾವಿಗೆ ಅಂಡ ಪಿಂಡ ಬ್ರಹ್ಮಾಂಡ ಅಬ್ದಿ ಆಕಾಶ ಆತ್ಮನೆಂದುಂಟೆ? ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು.