Index   ವಚನ - 47    Search  
 
ಕರವೂರ ನಿರಹಂಕಾರ-ಸುಜ್ಞಾನಿದೇವಿಯರ ಬಸುರಲ್ಲಿ ಬಂದರೆನ್ನಬಹುದೆ ಪ್ರಭುದೇವರ? ಮಂಡಗೆಯ ಮಾದಿರಾಜ- ಮಾದಲಾಂಬಿಕೆಯಮ್ಮನವರ ಬಸುರಲ್ಲಿ ಬಂದರೆನ್ನಬಹುದೆ ಬಸವೇಶ್ವರನ? ಅಕ್ಕನಾಗಲಾಂಬಿಕೆಯಮ್ಮನ ಬಸುರಲ್ಲಿ ಬಂದರೆನ್ನಬಹುದೆ ಚೆನ್ನಬಸವೇಶ್ವರನ? ಮೊರಡಿಯ ಮುದ್ದುಗೌಡ-ಸುಗ್ಗವ್ವೆಯ[ರ] ಬಸುರಲ್ಲಿ ಬಂದೆರೆನ್ನಬಹುದೆ ಸಿದ್ಧರಾಮೇಶ್ವರನ? ಇವರು ಒಬ್ಬರಿಂದಾದವರಲ್ಲ, ತಮ್ಮಿಂದ ತಾವಾದರು. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ [ನಿಲ್ಲು] ಮಾಣು.