Index   ವಚನ - 67    Search  
 
ಜಲದೊಳಗಣ ಬೊಬ್ಬುಳಿಕೆ ಜಲ ಘಟ್ಟಿಗೊಂಡಲ್ಲಿ ಅಡಗುವ ತೆರನ ಬಲ್ಲಡೆ ಬಲ್ಲೆ. ಮಹೇಂದ್ರಜಾಲವು ಮರೀಚಿಕಾ ಜಲವು. ಎಲ್ಲಿ ಹುಟ್ಟಿ ಎಲ್ಲಿ ಅಡಗುವ ತೆರನ ಬಲ್ಲಡೆ ಬಲ್ಲೆ. ಮಹಾನಾದ ಸುನಾದ, ಸುನಾದಕ್ಕೆ ಕೈಗೈದು ಆ ಸುನಾದವು ಮಹಾನಾದದೊಡನೆ ಮಥನಿಸಿ ಇವೆರಡರ ಪ್ರಾಣ ಚೈತನ್ಯ ಒಂದಾಗಿ ಹುಟ್ಟಿ ಅಡಗುವ ಭೇದವ ಬಲ್ಲೆನಾಗಿ, ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದುದಾಗಿ.