Index   ವಚನ - 119    Search  
 
ಲೀಲೆಗೆ ಹೊರಗಾದ ಲಿಂಗವೆ ಬಾರಯ್ಯಾ, ಎನ್ನ ಅಂಗದೊಳಗಾಗು. ಶ್ರುತ ದೃಷ್ಟ ಅನುಮಾನದಲ್ಲಿ ನೋಡುವವರಿಗೆಲ್ಲಕ್ಕೂ ಅತೀತನಾಗು. ಆಗೆಂಬುದಕ್ಕೆ ಮುನ್ನವೆ ಆ ಗುಂಡು ಕಾಯದ ಕರಸ್ಥಲದಲ್ಲಿ ನಿರ್ಭಾವವಾಗಿ, ಕಾಯವಡಗಿ, ಭಾವವೆಂಬ ಬಯಲಾಯಿತ್ತು. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂಬುದಕ್ಕೆ ಮುನ್ನವೆ.