Index   ವಚನ - 36    Search  
 
ಕಾಳಕೂಟ ಹಾಳಾಹಳ ವಿಷಂಗಳು ಕುಡಿದವರನಲ್ಲದೆ ಮಿಕ್ಕವರನೇನನೂ ಮಾಡಲಮ್ಮವು! ಸ್ತ್ರೀಯೆಂಬ ಕಡುನಂಜು ನೋಡಿದವರ, ನುಡಿಸಿದವರ, ಕೇಳಿದವರ, ಕೂಡಿದವರ, ಗಡಣ ಸಂಗಮಾತ್ರದಿಂ ಮಡುಹಿ ನರಕದಲ್ಲಿ ಕೆಡಹದೆ ಮಾಡಳು. ದೇವ ದಾನವ ಮಾನವರನಾದಡು ಉಳಿಯಲೀಯಳು! ಆವಂಗೆಯೂ ಗೆಲಬಾರದೀ ಮಾಯೆಯ! ಗೆಲಿದಾತ ನೀನೆ ಸಿಮ್ಮಲಿಗೆಯ ದಾತ ನೀನೆ, ಸಿಮ್ಮಲಿಗೆಯ ಚೆನ್ನರಾಮಾ!