Index   ವಚನ - 75    Search  
 
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: "ಏಕ ಏವ ಹಿ ಭೂತಾತ್ಮಾ ಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||" ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ಧೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.