Index   ವಚನ - 20    Search  
 
ಶ್ರೀಗುರುಲಿಂಗವು ಶಿಷ್ಯನ ಬರವ ಕಂಡು, ಬಂದು ಪಾದದ ಮೇಲೆ ಬೀಳುವಾತ ಗುರುಲಿಂಗ, ಮಂಡೆಯ ಹಿಡಿದೆತ್ತುವಾತ ಶಿಷ್ಯ. ಶ್ರೀಗುರುಲಿಂಗವು ಶಿಷ್ಯನ ಸಿಂಹಾಸನದಲ್ಲಿ ಕುಳ್ಳಿರಿಸಿ ಪಾದಾರ್ಚನೆಯ ಮಾಡುವಾತ ಗುರುಲಿಂಗ, ಮಾಡಿಸಿಕೊಂಬಾತ ಶಿಷ್ಯ. ಶ್ರೀಗುರುಲಿಂಗವು ಶಿಷ್ಯನಾರೋಗಣೆಯ ಮಾಡುತ್ತಿದ್ದಾನೆಂದು ಬಂದು, ಪ್ರಸಾದವ ಕೊಂಬಾತ ಗುರುಲಿಂಗ, ಇಕ್ಕುವಾತ ಶಿಷ್ಯ. ಇದು ಕಾರಣ ದ್ವಿವಿಧ ಸಂಬಂಧ ಸನುಮತವಾಯಿತ್ತು, ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ.