Index   ವಚನ - 38    Search  
 
ಮಡಿಲಲ್ಲಿ ಸುತ್ತಿದ ಹಾವಿನಂತೆ ಮಡಿಲಲ್ಲಿ ಕಟ್ಟಿದಡೇನು? ಕೊರಳಲ್ಲಿ ಸುತ್ತಿದ ಹಾವಿನಂತೆ ಕೊರಳಲ್ಲಿ ಕಟ್ಟಿದಡೇನು? ಕಳವು ಹಾದರ ಭವಿಯ ಸಂಗ ಅನ್ಯದೈವವ ಬಿಡದನ್ನಕ್ಕ ಲಿಂಗಭಕ್ತನೆನಿಸಲು ಬಾರದಯ್ಯ. ಅನಾಚಾರ ಸಹಿತ ನರಕಿ, ಆಚಾರಸಹಿತ ಭಕ್ತ. ಕೂಡಲಚೆನ್ನಸಂಗಯ್ಯನೊಲ್ಲ ಭೂಮಿಭಾರಕರ.