Index   ವಚನ - 129    Search  
 
ಭೂಮಿ ನಷ್ಟವಾದರೆ ಜಲಕ್ಕಿಂಬಿಲ್ಲ, ಜಲ ನಷ್ಟವಾದರೆ ಇಂದ್ರಿಯಕ್ಕಿಂಬಿಲ್ಲ, ಇಂದ್ರಿಯ ನಷ್ಟವಾದರೆ ಜಂಗಮಕ್ಕಿಂಬಿಲ್ಲ, ಜಂಗಮ ನಷ್ಟವಾದರೆ ಲಿಂಗಕ್ಕಿಂಬಿಲ್ಲ. ಇದು ಕಾರಣ, ಸರ್ವ ಕರಣಾದಿಗಳಂ ಬಿಡದೆ ಆನು ವ್ರತಿಯೆಂಬವರ ತೋದಿರಯ್ಯಾ ಕೂಡಲಚೆನ್ನಸಂಗಮದೇವಾ.