Index   ವಚನ - 137    Search  
 
ಮಾಟವಿಲ್ಲದ ಕೂಟವದೇಕೋ? ಕೂಟವಿಲ್ಲದ ಮಾಟವದೇಕೋ? ಮಾಟಕೂಟವೆರಡರನುವರಿಯಬೇಕು. ಸಟೆಯಿಲ್ಲದೆ ದಿಟ ಘಟಿಸಿ ಸ್ವಯವಾಗಬೇಕು. ಕೂಟಮಾಟವೆರಡರ ಅನುಮತದಿಂದವೆ ಭಕ್ತಿ. ಇದೇ [ಕೂಟ] ಕೂಡಲಚೆನ್ನಸಂಗಯ್ಯಾ ನಿಮ್ಮಲ್ಲಿ.