Index   ವಚನ - 141    Search  
 
ಮೊದಲಲಿ ಅಚ್ಚೊತ್ತಿದ ಕಾರಣ ಎಚ್ಚರಿಕೆಯಾಯಿತ್ತು. ಗುರುಕಾರುಣ್ಯದಿಂದ ಅರಿವಾಯಿತ್ತು, ಆಚಾರವಾಯಿತ್ತು. ಜಂಗಮದಿಂದ ತಿಳಿದ ತಿಳಿವಿನಲ್ಲಿ ಪ್ರಸಾದ ಸಾಧ್ಯವಾಯಿತ್ತು. ಕೂಡಲ ಚೆನ್ನಸಂಗಯ್ಯನಲ್ಲಿ ಏಕಾರ್ಥವಾಯಿತ್ತು.