Index   ವಚನ - 159    Search  
 
ಮದ್ಯಪಾನಿಗೆ ಲಿಂಗಸಾಹಿತ್ಯವ ಮಾಡಿದಾತ ಹಿಂಗದೆ ನರಕದಲಾಳುತ್ತಿಪ್ಪನು. ಮಾಂಸಾಹಾರಿಗೆ ಲಿಂಗಸಾಹಿತ್ಯವ ಮಾಡಿದಾತನ ವಂಶಕ್ಷಯವೆಂದುದು. ಜೂಜುಗಾರಂಗೆ ಲಿಂಗಸಾಹಿತ್ಯವ ಮಾಡಿದಾತ ರೌರವನರಕಕ್ಕೆ ಹೋಹನು. ಸೂಳೆಗೆ ಲಿಂಗಸಾಹಿತ್ಯವ ಮಾಡಿದಾತ ಏಳೇಳು ಜನ್ಮದಲ್ಲೂ ಶ್ವಾನನ ಗರ್ಭದಲ್ಲಿ ಬರುತಿಪ್ಪನು. ಅಂಗಹೀನಂಗೆ ಲಿಂಗಸಾಹಿತ್ಯವ ಮಾಡಿದಾತ ಲಿಂಗದ್ರೋಹಿ, ಆತನ ಮುಖವ ನೋಡಲಾಗದು. "ಮದ್ಯಪಾನೀ ಮಾಂಸಭಕ್ಷೀ ಶಿವದೀಕ್ಷಾವಿವರ್ಜಿತಃ| ದ್ಯೂತೀ ವೇಶ್ಯಾಂಗಹೀನಶ್ಚ ತದ್ಗುರೋರ್ದರ್ಶನಂ ತ್ಯಜೇತ್ "|| ಇದು ಕಾರಣ ಕೂಡಲಚೆನ್ನಸಂಗನಲ್ಲಿ ವಿಚಾರಿಸದೆ ಲಿಂಗವ ಕೊಟ್ಟ ಗುರುವಿಂಗೆ ನರಕ ತಪ್ಪದು.