Index   ವಚನ - 179    Search  
 
ಸೋಮವಾರ ಮಂಗಳವಾರ ಶಿವರಾತ್ರಿಯೆಂದು ಮಾಡುವ ಭಕ್ತರ ಲಿಂಗಭಕ್ತಂಗೆ ನಾನೆಂತು ಸರಿಯೆಂಬೆನಯ್ಯಾ? ದಿನ ಶ್ರೇಷ್ಠವೋ ಲಿಂಗ ಶ್ರೇಷ್ಠವೋ? ದಿನ ಶ್ರೇಷ್ಠವೆಂದು ಮಾಡುವ ಪಂಚಮಹಾಪಾತಕರ ಮುಖವ ನೋಡಲಾಗದು. "ಸೋಮೇ ಭೌಮೇ ವ್ಯತೀಪಾತೇ ಸಂಕ್ರಾಂತಿ ಶಿವರಾತ್ರಯೋಃ| ಏಕಭಕ್ತೋಪವಾಸೇನ ನರಕೇ ಕಾಲಮಕ್ಷಯಂ"|| ಇದು ಕಾರಣ ಕೂಡಲಚೆನ್ನಸಂಗಯ್ಯಾ ಇಂಥವರ ಮುಖವ ನೋಡಲಾಗದು.