Index   ವಚನ - 186    Search  
 
ಶ್ರೀ ಗುರುಸ್ವಾಮಿ ಶಿಷ್ಯನನನುಗ್ರಹಿಸುವ ಪರಿಯೆಂತೆಂದರೆ: ಆಚಾರಸ್ಥಲ ಗುರುಸ್ಥಲ ಲಿಂಗಸ್ಥಲ ಜಂಗಮಸ್ಥಲ ಅರ್ಪಿತಸ್ಥಲ ಪ್ರಸಾದಸ್ಥಲವೆಂದು ಕರುಣಿಸುವುದು ದೀಕ್ಷೆ. ಈ ಕ್ರಮವರಿದು ಮಹಾಪ್ರಸಾದವೆಂದು ಕೈಕೊಂಡ ಬಳಿಕ "ಪರಪಾಕಂ ನ ಕರ್ತವ್ಯಂ ಲಿಂಗನೈವೇದ್ಯಕಿಲ್ಬಿಷಮ್| ಸ್ವಯಂಪಾಕಂ ಪವಿತ್ರಾಣಾಂ ಲಿಂಗನೈವೇದ್ಯಮುತ್ತಮಮ್"|| ಎಂಬುದಾಗಿ, ಒಡಲ ಕಕ್ಕುಲತೆಗೆ, ಭಕ್ತನ ದಾಕ್ಷಿಣ್ಯಕ್ಕೆ ಅನ್ಯದೈವ ಭವಿನೇಮಸ್ತರುಳ್ಳಲ್ಲಿ ಹೊಕ್ಕರೆ, ಕೂಡಲಚೆನ್ನಸಂಗಾ ಅವರಂದೆ ದೂರ.