Index   ವಚನ - 194    Search  
 
ಪತಿವ್ರತೆಯಾದಡೆ ಪರಪುರುಷರ ಸಂಗವೇತಕೆ? ಲಿಂಗಸಂಗಿಯಾದಡೆ ಅನಂಗಸಂಗವೇತಕೆ? ಕಂಡ ಕಂಡವರ ಹಿಂದೆ ಹರಿವ ಚಾಂಡಾಳಗಿತ್ತಿಯಂತೆ; ಒಬ್ಬರ ಕೈವಿಡಿದು, ಒಬ್ಬರಿಗೆ ಮಾತಕೊಟ್ಟು, ಒಬ್ಬರಿಗೆ ಸನ್ನೆಗೆಯ್ವ ಬೋಸರಿಗಿತ್ತಿಯಂತೆ; ಪ್ರಾಣಲಿಂಗವಿದ್ದಂತೆ ಸ್ಥಾವರಲಿಂಗಕ್ಕೆ ಹರಸಿ ಹೊಡವಡಲೇಕೆ? ಪಾದೋದಕ ಪ್ರಸಾದ ಜೀವಿಯಾದ ಬಳಿಕ ಅನ್ಯರಿಗೆ ಕೈಯಾನಲೇಕೆ? ಇದು ಕಾರಣ ಕೂಡಲಚೆನ್ನಸಂಗಯ್ಯಾ ಇಂತಪ್ಪ ಪಾಪಿಗಳನೆನಗೆ ತೋರದಿರಯ್ಯಾ.