Index   ವಚನ - 264    Search  
 
ಪದವು ಪದಾರ್ಥವು ಎಂಬರು. ಪದವಾವುದೆಂದರಿಯರು, ಪದಾರ್ಥವಾವುದೆಂದರಿಯರು. ಪದವೇ ಲಿಂಗ, ಪದಾರ್ಥವೇ ಭಕ್ತ. ಇದನರಿದು ಪದಾರ್ಥವ ತಂದು ಲಿಂಗಾರ್ಪಿತವ ಮಾಡಬಲ್ಲರೆ ಕೂಡಿಕೊಂಡಿಪ್ಪ ನಮ್ಮ ಕೂಡಲಚೆನ್ನಸಂಗಮದೇವ.