Index   ವಚನ - 285    Search  
 
ಲಿಂಗಪ್ರಸಾದಿಗಳೆಂಬರು ಬಲ್ಲರೆ ನೀವು ಹೇಳರೋ! ಸಜ್ಜನಶುದ್ಧಶಿವಾಚಾರಸಂಪನ್ನರಪ್ಪ ಸದ್ಭಕ್ತರು ತಮ್ಮ ಲಿಂಗಕ್ಕೆ ಗುರುಮಂತ್ರೋಪದೇಶದಿಂದ ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ, ಸಕಲ ಪದಾರ್ಥವೆಲ್ಲವ ಪ್ರಮಾಣಿನಲ್ಲಿ ಭರಿತವಾಗಿ ಗಡಣಿಸಿ, ತನು ಕರಗಿ ಮನ ಕರಗಿ ನಿರ್ವಾಹ ನಿಷ್ಪತ್ತಿಯಲಿ ಗಟ್ಟಿಗೊಂಡು ತಟ್ಟುವ ಮುಟ್ಟುವ ಭೇದದಲ್ಲಿಯೇ ಚಿತ್ತವಾಗಿ ಲಿಂಗಾರ್ಪಿತವ ಮಾಡೂದು ಆ ಪ್ರಸಾದವ ತನ್ನ ಪಂಚೇಂದ್ರಿಯ ಸಪ್ತಧಾತು ತೃಪ್ತವಾಗಿ ಭೋಗಿಸೂದು. ಲಿಂಗಪ್ರಸಾದ ಗ್ರಾಹಕನ ಪರಿಯಿದು, ಕೂಡಲಚೆನ್ನಸಂಗಮದೇವಾ.