Index   ವಚನ - 291    Search  
 
ಸತ್ಯವಿಲ್ಲದ ಭಕ್ತಿಯ ಸಾವಿರ ವರುಷ ಮಾಡಿದರೇನು? ನಿಷ್ಠೆಯಿಲ್ಲದ ಪೂಜೆಯನೇಸುಕಾಲ ಮಾಡಿದರೇನು? ಭಾವ ನೆಲೆಗೊಳ್ಳದ ಪ್ರಸಾದವನೇಸುಕಾಲ ಕೊಂಡಲ್ಲಿ ಫಲವೇನು? ಅಭ್ಯಾಸವಾಯಿತ್ತಲ್ಲದೆ, ಒಬ್ಬರೊಬ್ಬರ ಕಂಡು ಮಾಡುವರಲ್ಲದೆ, ಸಹಜವಿಲ್ಲ, ಸಮ್ಯಕ್ಕಿಲ್ಲ, ನಿಜವಿಲ್ಲ. ಇದು ಕಾರಣ, ಇಂತಪ್ಪವರ ಭಕ್ತರೆಂದೆನಲಾಗದು, ಕೂಡಲಚೆನ್ನಸಂಗಯ್ಯಾ ನೀ ಸಾಕ್ಷಿಯಾಗಿ ಛೀಯೆಂಬೆನು.