Index   ವಚನ - 316    Search  
 
ಗುರುಶಿಷ್ಯ ಸಂಬಂಧವನರಸುವ ಮಹಂತರ ನಾನೇನೆಂಬೆನಯ್ಯಾ; ಶಿಷ್ಯಂಗೆ ಗುರು ಶಿವಸೋದರ, ಗುರುವಿಂಗೆ ಲಿಂಗ ಶಿವಸೋದರ, ಲಿಂಗಕ್ಕೆ ಜಂಗಮ ಶಿವಸೋದರ, [ಜಂಗಮಕ್ಕೆ ಪ್ರಸಾದ ಶಿವಸೋದರ] ಪ್ರಸಾದಕ್ಕೆ ಪರಿಣಾಮವೆ ಶಿವಸೋದರ, ಇದು ಕಾರಣ, ಗುರುವಿನಲ್ಲಿ ಗುಣವ, ಲಿಂಗದಲ್ಲಿ ಶಿಲೆಯ ಜಂಗಮದಲ್ಲಿ ಕುಲವ, ಪ್ರಸಾದದಲ್ಲಿ ರುಚಿಯ, ಪರಿಣಾಮದಲ್ಲಿ ಕುರುಹನರಸುವ ಪಾತಕರ ತೋರದಿರು ಕೂಡಲಚೆನ್ನಸಂಗಮದೇವಾ.