Index   ವಚನ - 338    Search  
 
ತನುವ್ಯಸನ ಮನವ್ಯಸನ ಧನವ್ಯಸನ ವಾಹನವ್ಯಸನ ಉತ್ಸಾಹವ್ಯಸನ ವಿಶ್ವವ್ಯಸನ ಸೇವಕವ್ಯಸನ ಇಂತೀ ಸಪ್ತವ್ಯಸನಂಗಳು: ತನುವ್ಯಸನ ವಸ್ತು ಆಭರಣ ವೀಳೆಯ ಬಯಸೂದು, ಮನವ್ಯಸನ ಕಳವು ಹುಸಿ ಪಾರದ್ವಾರವ ಬಯಸೂದು, ಧನವ್ಯಸನ ರಾಜ್ಯವ ಬಯಸೂದು. ವಾಹನವ್ಯಸನ ಆನೆ ಕುದುರೆ ಸೇನೆ ಬಯಸೂದು, ವಿಶ್ವವ್ಯಸನ ಚತುರ್ವಿಧಕರ್ತವ್ಯ ಬಯಸೂದು, ಉತ್ಸಾಹವ್ಯಸನ ಪುತ್ರ ಮಿತ್ರ ಕಳತ್ರವ ಬಯಸೂದು, ಸೇವಕವ್ಯಸನ ಉಣಲಾರೆ, ಉಡಲಾರೆ ತೊಡಲಾರೆನೆಂದೆನುತ್ತಿಹುದು. ಈ ಸಪ್ತವ್ಯಸನಂಗಳಂ ಬಿಟ್ಟು ಲಿಂಗವ್ಯಸನಿಯಾಗಬಲ್ಲರೆ ಕೂಡಲಚೆನ್ನಸಂಗಯ್ಯನಲ್ಲಿ ಪ್ರಾಣಲಿಂಗಿಗಳೆಂಬೆನು.