ಶೀಲ ಶೀಲವೆಂದೇನೋ?
ಮಾಡಿದ ಮನೆ, ಹೂಡಿದ ಒಲೆ,
ಅಟ್ಟುಂಬ ಮಡಕೆ, ಕಟ್ಟಿದ ಕೆರೆ,
ಬಿತ್ತಿದ ಕೆಯಿ ಶೀಲವಲ್ಲದೆ ತನ್ನ ಮನಕ್ಕೆ ಶೀಲವಿಲ್ಲ.
ಶೀಲವೆಂತೆಂದರೆ:
ಲಿಂಗವು ಬಂದು ಮನವನಿಂಬುಗೊಂಬುದೇ ಶೀಲ.
ಜಂಗಮ ಬಂದು ಧನವನಿಂಬುಗೊಂಬುದೇ ಶೀಲ.
ಪ್ರಸಾದ ಬಂದು ತನುವನಿಂಬುಗೊಂಬುದೇ ಶೀಲ.
ಇಂತಪ್ಪ ಶೀಲಕ್ಕೆ ನಮೋ ನಮೋ.
ಉಳಿದ ದುಃಶೀಲರ ಕಂಡರೆ ಮೆಚ್ಚುವನೆ ನಮ್ಮ
ಕೂಡಲಚೆನ್ನಸಂಗಯ್ಯ?