Index   ವಚನ - 446    Search  
 
ಹೃದಯಕಮಲ ಮಧ್ಯದ ಶುದ್ಧಾತ್ಮನನು ಸಿದ್ಧ ವಿದ್ಯಾಧರ ನಿರ್ದೇಹಿಗಳು ಬಲ್ಲರೆ? ಕಾಯದ ಕೈಯಲಿ ಕೊಟ್ಟುದು ಮಾಯಾಮುಖದರ್ಪಿತ. ಇದಾವ ಮುಖವೆಂದರಿಯದೆ ಭ್ರಮೆ[ಗೊಂಡು] ಹೋದರು. ಕೊಂಬ ಕೊಡುವ ಎಡೆಯನಿಂಬಿನ ಗ್ರಾಹಕ ಬಲ್ಲ. ಕೂಡಲಚೆನ್ನಸಂಗನಲ್ಲಿ ಬಸವಣ್ಣಪ್ರಭು ಬಲ್ಲ.