Index   ವಚನ - 518    Search  
 
ಗತಿಪದಮುಕ್ತಿಯ ಬಯಸಿ ಮಾಡುವಾತ ಭಕ್ತನಲ್ಲ, ಜೀವನೋಪಾಯಕ್ಕೆ ಬೇಡುವಾತ ಜಂಗಮವಲ್ಲ. ಗತಿಪದ ಮುಕ್ತಿಸೂತಕವಿರಹಿತ ಭಕ್ತ, ಹಮ್ಮು ಬಿಮ್ಮು ಗಮನನಾಸ್ತಿ ಜಂಗಮ. ಮಾಡುವಡೆ ಭಕ್ತ ಮಾಟದೊಳಗಿಲ್ಲದಿರಬೇಕು, ಬೇಡುವಡೆ ಜಂಗಮ ಕೊಂಬುದರೊಳಗಿಲ್ಲದಿರಬೇಕು. ಪ್ರಾಣವಿಲ್ಲದ ಭಕ್ತ ರೂಹಿಲ್ಲದ ಜಂಗಮ, ಉಭಯಕುಳ ಸಂದಳಿದಂದು ಕೂಡಲಚೆನ್ನಸಂಗನಲ್ಲಿ ಭಕ್ತಜಂಗಮವೆಂಬೆ.