Index   ವಚನ - 572    Search  
 
ಭಕ್ತಿ ಭಕ್ತಿಯೆಂದೇನು ತುತ್ತಿಡುವನ್ನಕ್ಕವೆ? ಗುರು ಗುರುವೆಂದೇನು ಪರಕೆ ಹೆಸರ ಹೇಳುವನ್ನಕ್ಕವೆ? ಲಿಂಗ ಲಿಂಗವೆಂದೇನು ಅಂಗ ಬೀಳುವನ್ನಕ್ಕವೆ? ಜಂಗಮ ಜಂಗಮವೆಂದೇನು ಮುಂದಿದ್ದ ಧನವೆಲ್ಲಾ ಸವೆವನ್ನಕ್ಕವೆ? ಪಾದೋದಕ ಪಾದೋದಕವೆಂದೇನು ಇವೆಲ್ಲಾ ಜಲವ ಕೂಡಿ ಹೋಹನ್ನಕ್ಕವೆ? ಪ್ರಸಾದ ಪ್ರಸಾದವೆಂದೇನು ಉಂಡುಂಡು ತನು ಕಳಚಿ ಪ್ರಳಯಕ್ಕೊಳಗಹನ್ನಕ್ಕವೆ? ಅಲ್ಲಿ ನಿಂದಿರದಿರಾ ಮನವೆ, ನಿಂದಿದ್ದರೆ ನೀ ಕೆಡುವೆ, ಬಂದರೆ ನಾ ಕೆಡುವೆ, ಎನ್ನ ತಂದೆ ಕೂಡಲಚೆನ್ನಸಂಗಯ್ಯಾ, ಈ ಅನುವ ಬಸವಣ್ಣ ತೋರಿದನಾಗಿ, ಆನು ಬದುಕಿದೆನು.