Index   ವಚನ - 666    Search  
 
ಸಾವ ಜೀವ ಬಿಂದುವಿನ ಸಂಚ, ಸಾಯದ ನಾದ ಪ್ರಾಣದ ಸಂಚ. ಸಾವ ಜೀವದ, ಸಾಯದ ಪ್ರಾಣದ, ಎರಡರ ಭೇದವನರಿಯದಿರ್ದಡೆ ಲಾಂಛನಧಾರಿ, ಸಾವ ಜೀವದ, ಸಾಯದ ಪ್ರಾಣದ ಎರಡರ ಭೇದವ ಭೇದಿಸಿ ಅರಿವು ಕಣ್ದೆರೆದ ಪ್ರಾಣಲಿಂಗಸಂಬಂಧವಂತಿರಲಿ. ಮತ್ತೆಯೂ ಪ್ರಾಣಲಿಂಗಸಂಬಂಧವೇ ಬೇಕು. ಇಂತೀ ಉಭಯ ಸಂಬಂಧವಳಿದ ಸಂಬಂಧ ನಿಜವಾಯಿತ್ತು, ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ