Index   ವಚನ - 730    Search  
 
ಗುರುವೆಂಬ ಪ್ರತಿಭಾವವಿಲ್ಲದ ಶಿಷ್ಯ, ಶಿಷ್ಯನೆಂಬ ಪ್ರತಿಭಾವವಿಲ್ಲದ ಗುರು, ಏನೆಂಬೆನೇನೆಂಬೆ ಎರಡಿಲ್ಲದ ಘನವನೇನೆಂಬೆನೇನೆಂಬೆ! ಉಭಯವಳಿದು ಒಂದಾದುದನೇನೆಂಬೆನೇನೆಂಬೆ! ಕೂಡಲಚೆನ್ನಸಂಗನಲ್ಲಿ .ಗುರುಶಿಷ್ಯಸಂಬಂಧವಪೂರ್ವ.