Index   ವಚನ - 735    Search  
 
ಅಂಗ ಲಿಂಗವೆಂಬರು, ಲಿಂಗ ಅಂಗವೆಂಬರು, ಅದು ಹುಸಿ ಕಾಣಿರೊ, ಅಯ್ಯಾ! ಅಂಗವೇ ಲಿಂಗವಾದರೆ ಕಾಯದಲ್ಲಿ ಕಳವಳವುಂಟೆ? ಲಿಂಗವೆ ಅಂಗವಾದರೆ ಪ್ರಳಯಕ್ಕೊಳಗಹುದೆ? ಲಿಂಗ ಲಿಂಗವಲ್ಲ, ಲಿಂಗ ಅಂಗವಲ್ಲ. ಅಂಗ-ಲಿಂಗ ಸಂಬಂಧವಳಿದಲ್ಲಿ ಪ್ರಾಣಲಿಂಗಸಂಬಂಧಿ, ಪ್ರಾಣ ನಿಃಪ್ರಾಣವಾದಲ್ಲಿ ಲಿಂಗರೂಪ, ರೂಪು ನಾಸ್ತಿಯಾದಂದು ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯವು.