Index   ವಚನ - 771    Search  
 
ಮಾರ್ಗಕ್ರಿಯಾಸಮಯದಲ್ಲಿ ಶಿವಶಕ್ತಿಸಂಪುಟ. ಮೀರಿದಕ್ರಿಯಾಸಮಯದಲ್ಲಿ ಶಿವಲಿಂಗಸಂಪುಟ. ಉಭಯಕ್ರಿಯಾನುಭಾವ ನೆಲೆಗೊಂಡಲ್ಲಿ ಮನಲಿಂಗಸಂಪುಟ. ಮನ ಲಿಂಗ ಲೀಯವಾದ ಬಳಿಕ ತೆರಹಿಲ್ಲದೆ ಕುರುಹಳಿದ ಲಿಂಗೈಕ್ಯ. ಸುತ್ತಿದ ಪ್ರಪಂಚು ಮೆಲ್ಲಮೆಲ್ಲನೆ ಅಚ್ಚುಗವಿಲ್ಲದೆ ಹಿಂಗಿದವು ಕೂಡಲಚೆನ್ನಸಂಗಾ ಲಿಂಗೈಕ್ಯಂಗೆ.