Index   ವಚನ - 873    Search  
 
ಅಂಗದ ಮೇಲಿಹ ಲಿಂಗಕ್ಕರ್ಪಿಸಿದಲ್ಲದೆ ಕೊಳಲಾಗದು. ಅಂಗೈಯಲ್ಲಿ ಹಿಡಿದು ಅರ್ಪಿಸಿಹೆನೆಂದಡೆ ಅರ್ಪಿತವಾಗದು. ಇನ್ನು ಅರ್ಪಿಸುವ ಪರಿ ಎಂತೆಂದಡೆ: ನಾಸಿಕದಲ್ಲಿ ಗಂಧ ಅರ್ಪಿತ, ಜಿಹ್ವೆಯಲ್ಲಿ ರುಚಿ ಅರ್ಪಿತ, ನೇತ್ರದಲ್ಲಿ ರೂಪು ಅರ್ಪಿತ, ತ್ವಕ್ಕಿನಲ್ಲಿ ಸ್ಪರ್ಶನ ಅರ್ಪಿತ, ಶೋತ್ರದಲ್ಲಿ ಶಬ್ದ ಅರ್ಪಿತ, ಹೃದಯದಲ್ಲಿ ಪರಿಣಾಮ ಅರ್ಪಿತ. ಇದನರಿದು ಭೋಗಿಸಬಲ್ಲಡೆ ಪ್ರಸಾದ. ಈ ಕ್ರಮವನರಿಯದೆ ಕೊಂಡ ಪ್ರಸಾದವೆಲ್ಲವು ಅನರ್ಪಿತ. ನುಂಗಿದ ಉಗುಳೆಲ್ಲವು ಕಿಲ್ಬಿಷ, ಕೂಡಲಚೆನ್ನಸಂಗಮದೇವಾ.