Index   ವಚನ - 882    Search  
 
ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಭಕ್ತನಾಗಲಿ ಜಂಗಮವಾಗಲಿ ತನ್ನ ಅಂಗದ ಮೇಲೆ ಅನ್ಯ ಮಣಿಮಾಲೆ ನಂದಿವುಂಗುರ ನಾಗಕುಂಡಲ ಮೊದಲಾದ ಭವಿಶೈವದ ಮುದ್ರೆಗಳ ಧರಿಸಲಾಗದು. ಭೂತೇಶನೆಂಬ ಲಿಂಗವನರ್ಚಿಸಿ ಪ್ರಸಾದವ ಕೊಂಡೆವೆಂಬ ದ್ರೋಹಿಗಳ ಕುಂಭೀಪಾಕ ನಾಯಕನರಕದಲ್ಲಿಕ್ಕುವ ಕೂಡಲಚೆನ್ನಸಂಗಮದೇವ.